ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕು ಕು೦ಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಕ್ಟೋಬರ್-7ರಂದು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಹಿರಿಯೂರು ತಾಲೂಕಿನ ಲಕ್ಕವ್ವನಹಳ್ಳಿ ರಸ್ತೆಯ ಸಂಘದ ಕಚೇರಿಯಲ್ಲಿ ಕುಂಚಿಟಿಗ ಸಮಾಜದ ಮಹತ್ವದ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಕುಂಚಿಟಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ.ಹನುಮಂತರಾಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿರಿಯೂರು ತಾಲೂಕು ಕು೦ಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪ್ರೊ. ಮೈಸೂರು ಶಿವಣ್ಣರವರ ಅಧ್ಯಕ್ಷತೆಯಲ್ಲಿ ಸಭೆ ಕರೆದಿದ್ದು ತಪ್ಪದೇ ಎಲ್ಲಾ ಸದಸ್ಯರು ಸಮಯಕ್ಕೆ ಸರಿಯಾಗಿಹಾಜರಾಗಲು ಅವರು ಕೋರಿದ್ದಾರೆ.
ಸಭೆಯ ಚರ್ಚಾ ವಿಷಯಗಳಾದ ಜನಗಣತಿ, 2026ರ ಕ್ಯಾಲೆ೦ಡರ್ ಹೊರ ತರುವ ಕುರಿತು, ಸಾಮೂಹಿಕ ಸತ್ಯನಾರಾಯಣ ಪೂಜೆ ಆಯೋಜನೆ ಕುರಿತು,
ಹಿರಿಯ ನಾಗರಿಕರಿಗೆ ಗೌರವ ಸಮರ್ಪಣೆ ಸೇರಿದಂತೆ ಸಭಾ ಅಧ್ಯಕ್ಷರ ಅಪ್ಪಣೆ ಮೇರೆಗೆ ಇತರೆ ವಿಚಾರಗಳು ಚರ್ಚೆಗೆ ಬರಲಿವೆ ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98802 6016 ಸಂಪರ್ಕಿಸಬಹುದಾಗಿದೆ.

