ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ಯಾದವ್ ಇದೇ ತಿಂಗಳ ೧೧ ಮತ್ತು ೧೨ ರಂದು ಚಿತ್ರದುರ್ಗದ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ಪಿ.ಡಿ.ಎ. ಬಗ್ಗೆ ಕಾರ್ಯಕರ್ತರಲ್ಲಿ ಅರಿವು ಮೂಡಿಸಲಿದ್ದಾರೆಂದು ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿರುವುದರ ವಿರುದ್ದ ಜನತೆಯಲ್ಲಿ ಜಾಗೃತಿ ಮೂಡಿಸಿ ಸಮಾಜವಾದಿ ಪಕ್ಷ ಮಾನವೀಯತೆ, ಜಾತ್ಯತೀತತೆ ಸಮಾನತೆ, ಪ್ರಜಾಪ್ರಭುತ್ವದ ಮೇಲೆ ನಿಂತಿದೆ ಎನ್ನುವುದನ್ನು ತಿಳಿಸಲಿಕ್ಕಾಗಿ ರಾಜ್ಯ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಯಾವುದೇ ಜಾತಿ ತಾರತಮ್ಯವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವುದು ಸಮಾಜವಾದಿ ಪಾರ್ಟಿಯ ಉದ್ದೇಶ. ಪಕ್ಷಕ್ಕೆ ಶಕ್ತಿ ತುಂಬಿ ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕೆಂಬ ಗುರಿಯಿದೆ. ಅದಕ್ಕಾಗಿ ಅಖಿಲೇಶ್ ಯಾದವ್ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆಂದು ಎಸ್.ಲಕ್ಷ್ಮಿಕಾಂತ್ ನುಡಿದರು.
ಸಮಾಜವಾದಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಎನ್.ಡಿ.ಗುರುಮೂರ್ತಿ, ಮೊಳಕಾಲ್ಮುರು ತಾಲ್ಲೂಕು ಉಪಾಧ್ಯಕ್ಷ ತಿಪ್ಪೇಸ್ವಾಮಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

