ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ಈಗಾಗಲೇ 13,000 ರಸ್ತೆಗುಂಡಿಗಳನ್ನು ಮುಚ್ಚಲಾಗಿದೆ, ರಸ್ತೆಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ಉಳಿದ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಗುಂಡಿಗಳನ್ನು ಮುಚ್ಚಲು 750 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ವಾರ್ಡ್ಗಳ ಮಟ್ಟದಲ್ಲಿ ರಸ್ತೆ ಸುಧಾರಣೆಗೆ 1,100 ಕೋಟಿ ರೂ. ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ರಸ್ತೆಗುಂಡಿ ನಿವಾರಣೆಯೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ತಿಳಿಸಿದರು.

