ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರರ ಪಟ್ಟಿ ತಯಾರಿಕೆ ಕುರಿತು ಅಧಿಕಾರಿಗಳಿಗೆ ವಿಡೀಯೋ ಸಂವಾದದ ಮೂಲಕ ತರಬೇತಿ ನೀಡಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಾಗೂ ಜಿಲ್ಲಾ ಮಾಸ್ಟರ್ ಟ್ರೈನರ್ ಅವರು ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಕುರಿತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಹಾಗೂ ನಿರ್ಧಿಷ್ಟಾಧಿಕಾರಿಗಳಿಗೆ ತರಬೇತಿ ನೀಡಲಾಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮೆಹಬೂಜ್ ಜಿಲಾನಿ ಖುರೇಷಿ, ಚುನಾವಣಾ ತಹಶೀಲ್ದಾರ್ ಡಾ.ನಾಗವೇಣಿ, ಚಿತ್ರದುರ್ಗ ತಹಶೀಲ್ದಾರ್ ಗೋವಿಂದರಾಜು ಇದ್ದರು.

