ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಯು.ಸರ್.ರಾವ್ ಉಪಗ್ರಹ ಕೇಂದ್ರ ಬೆಂಗಳೂರು ಇವರು ಚಿತ್ರದುರ್ಗದ ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಇದೇ ಅಕ್ಟೋಬರ್-8 ರಂದು ಬೆಳಿಗ್ಗೆ 9.45 ರಿಂದ ಸಂಜೆ 4 ಯವರೆಗೆ ವಿಶ್ವ ಬಾಹ್ಯಾಕಾಶ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಇಸ್ರೋ ವಿಜ್ಞಾನಿಗಳಾದ ಶಿವಾನಂದ್.ಎಂ.ಕಾಮತ್, ಸುಮಾ ಹಿರೇಮಠ್, ಆರ್.ಬಾಲಾಜಿ, ಟಿ.ಎಸ್.ಗೋವಿಂದರಾಜ, ಆರ್.ಬಾಲಾಜಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದಶಕ ಬಿ.ಮಂಜುನಾಥ್, ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ, ನಿರ್ದೇಶಕರು ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿಎಚ್.ಎಸ್.ಟಿ.ಸ್ವಾಮಿ ಭಾಗವಹಿಸುವರು.
ಇದೇ ವೇಳೆ ಚಿತ್ರದುರ್ಗ ನಗರದ 5 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲಾ ವಿದ್ಯಾರ್ಥಿಗಳಿಗಾಗಿ ಬಾಹ್ಯಾಕಾಶ ಕುರಿತ ರಸಪ್ರಶ್ನೆ ಸ್ಪರ್ಧೆ, ವಿಶೇಷ ಉಪನ್ಯಾಸ, ವೈಜ್ಞಾನಿಕ ಚಟುವಟಿಕೆಗಳು ಹಾಗೂ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತ ವಸ್ತುಪ್ರದರ್ಶನ, ವೀಡಿಯೋ ಪ್ರದರ್ಶನ ಮುಂತಾದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ವೀಕ್ಷಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಮತ್ತು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

