ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್‌ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನುವ ಮಾಹಿತಿ ಲಭ್ಯವಾಗುತ್ತಿವೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹೆಚ್. ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.
ದೇವೇಗೌಡರಿಗೆ ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಸಮಸ್ಯೆ ಕಾಡಿದ್ದು ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇವೇಗೌಡರಿಗೆ ಐಸಿಯುನಲ್ಲಿ ಡಾ ಸುದರ್ಶನ್ ಬಲ್ಲಾಳ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

