ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಪತ್ರಿಕಾಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಇದೇ ಅಕ್ಟೋಬರ್ 11ರಂದು ಸಂಜೆ 4.30ಕ್ಕೆ ಡಾ.ಆಂಜನೇಯ ಉರ್ತಾಳ್ ಅವರ ಬೇಡ ಬುಡಕಟ್ಟಿನ ಭಾಷಿಕ ಸಂಕಥನ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ ಅಧ್ಯಕ್ಷತೆ ವಹಿಸುವರು. ಸಂಸ್ಕೃತಿ ಚಿಂತಕರು, ಹಂಪಿ ಕನ್ನಡ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ.ಬಂಜಗೆರೆ ಜಯಪ್ರಕಾಶ್ ಪುಸ್ತಕ ಬಿಡುಗಡೆ ಮಾಡುವರು. ಶಿವಮೊಗ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ.ಎಸ್.ಎಂ.ಮುತ್ತಯ್ಯ ಪುಸ್ತಕ ಕುರಿತು ಮಾತನಾಡುವರು.
ಮುಖ್ಯ ಅತಿಥಿಗಳಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಅಶೋಕ ಕುಮಾರ ರಂಜೇರೆ, ಸಿಂಧನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ.ಜಾಜಿ ದೇವೇಂದ್ರಪ್ಪ, ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಡಾ.ಎಸ್.ಮಾರುತಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ,
ದಾವಣಗೆರೆ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ಹೆಚ್.ಜಿ.ವಿಜಯಕುಮಾರ, ಹೊಸದುರ್ಗ ಕಿಟ್ಟದಾಳ್ ಕಲ್ಪತರು ಸಂಯುಕ್ತ ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಡಾ.ಆಂಜನೇಯ ಉರ್ತಾಳ್ ಹಾಗೂ ಸೃಷ್ಠಿ ಪ್ರಕಾಶದನ ಸೃಷ್ಠಿ ನಾಗೇಶ್ ಭಾಗವಹಿಸುವರು. ಸೃಷ್ಠಿ ಪ್ರಕಾಶನದ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

