ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾವಣಗೆರೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಸವಿಸ್ತಾರ ಚರ್ಚೆ ನಡೆಸಲಾಯಿತು ಎಂದು ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸಭೆಯಲ್ಲಿ ಎಲ್ಲಾ ಇಲಾಖೆಗಳ ಪ್ರಗತಿ ವರದಿ, ನಡೆಯುತ್ತಿರುವ ಯೋಜನೆಗಳ ಸ್ಥಿತಿ ಹಾಗೂ ಹೊಸ ಯೋಜನೆಗಳ ಅನುಷ್ಠಾನ ಕ್ರಮಗಳ ಕುರಿತು ಮಾಹಿತಿ ಪಡೆಯಲಾಯಿತು.
ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಚಟುವಟಿಕೆಗಳ ಕುರಿತು ವಿವರ ನೀಡಿದ್ದು, ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಿನ ಗುರಿಗಳನ್ನು ನಿಗದಿಪಡಿಸುವ ಕುರಿತು ಮಾತನಾಡಲಾಯಿತು.
ಸಭೆಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ,ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಅವರುಗಳು ಉಪಸ್ಥಿತರಿದ್ದರು.

