ಸಂಪುಟ ವಿಸ್ತರಣೆ ಅಥವಾ ಪುನಾರಚನೆ ರಾಜ್ಯ ನಾಯಕರ ಹಂತದಲ್ಲಿ ನಡೆಯಲ್ಲ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಸಂಪುಟದ ವಿಸ್ತರಣೆ ಅಥವಾ ಪುನಾರಚನೆ ರಾಜ್ಯ ನಾಯಕರ ಹಂತದಲ್ಲಿ ನಡೆಯುವ ವಿಷಯವಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂಪೂರ್ಣವಾಗಿ ಪಕ್ಷದ ಹೈಕಮಾಂಡ್‌ನಿರ್ಧಾರವಾಗಿರುತ್ತದೆ ಎಂದು ತಿಳಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

- Advertisement - 

ಸಂಪುಟ ಪುನಾರಚನೆ ಕುರಿತಾದ ಸುದ್ದಿಗಳನ್ನು ಯಾರು ಹರಡುತ್ತಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ. ವಾಲ್ಮೀಕಿ ಸಮುದಾಯದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಹೇಳಿಕೆ ನೀಡಿದ್ದರೂ, ಅದರ ಸಮಯವನ್ನು ನಿರ್ದಿಷ್ಟಪಡಿಸಿಲ್ಲ.

ಹಾಗೆಂದು ಸಂಪುಟ ಪುನಾರಚನೆಗೆ ಹೈಕಮಾಂಡ್ ನಿರ್ಧಾರ ಕೈಗೊಂಡರೆ ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಪರಮೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ.

- Advertisement - 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ಔತಣಕೂಟಕ್ಕೂ ಸಂಪುಟ ಪುನಾರಚನೆ ವಿಚಾರಕ್ಕೂ ಸಂಬಂಧವಿಲ್ಲ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

 

Share This Article
error: Content is protected !!
";