ಲೋಕಾಯುಕ್ತ ಎಸ್ಪಿ ಉದೇಶ್‌ ಬದಲಾವಣೆ ಕೋರಿದ್ದ ಅರ್ಜಿ ವಜಾ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಸ್ಥರಿಗೆ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣದಲ್ಲಿ ತನಿಖಾಧಿಕಾರಿ ಲೋಕಾಯುಕ್ತ ಪೊಲೀಸ್​ ವರಿಷ್ಠಾಧಿಕಾರಿ ಉದೇಶ್‌ಅವರ ಬದಲಾವಣೆ ಕೋರಿ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

ಲೋಕಾಯುಕ್ತ ಪೊಲೀಸರಿಗೆ ಎರಡು ತಿಂಗಳ ಗಡುವು ನೀಡಿ ಮುಡಾ ಪ್ರಕರಣದ ತನಿಖೆ ಪೂರ್ಣಗೊಳಿಸಲು ಆದೇಶ ಮಾಡಿದೆ.

- Advertisement - 

ನ್ಯಾಯಾಧೀಶರಾದ ಸಂತೋಷ್‌ಗಜಾನನ ಭಟ್‌ಅವರು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ. ಆದರೆ, ಸಿದ್ದರಾಮಯ್ಯ, ಅವರ ಪತ್ನಿ ಬಿ ಎಂ ಪಾರ್ವತಿ, ಭಾವ ಮೈದುನ ಬಿ ಎಂ ಮಲ್ಲಿಕಾರ್ಜುನ್‌, ವಿವಾದಿತ ಭೂಮಿಯ ಮಾಲೀಕ ದೇವರಾಜ್ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಪ್ರತಿಭಟನಾ ಅರ್ಜಿಯ ಸಂಬಂಧ ನ್ಯಾಯಾಲಯವು ಯಾವುದೇ ಆದೇಶ ಮಾಡಿಲ್ಲ.

ತನಿಖಾಧಿಕಾರಿ ಉದೇಶ್ ಪಕ್ಷಪಾತ ಧೋರಣೆ ಅನುಸುರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಿರುವ ಮಧ್ಯಂತರ ಅರ್ಜಿ ಹಾಗೂ ಮುಡಾ ಹಗರಣದ ಸಂಬಂಧ ಒಂದೇ ಎಫ್‌ಐಆರ್‌ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೆ ಬದಲಾಗಿ ಪ್ರತಿ ಸರ್ವೇ ನಂಬರ್‌ಗೆ ಒಂದರಂತೆ ಎಫ್‌ಐಆರ್‌ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಸ್ನೇಹಮಯಿ ಕೃಷ್ಣ ಕೋರಿದ್ದ‌ಅರ್ಜಿ ಕುರಿತು ಯಾವುದೇ ಆದೇಶವನ್ನು ನ್ಯಾಯಾಲಯ ನೀಡಿಲ್ಲ.

- Advertisement - 

ಏನಿದು ಪ್ರಕರಣ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ಅಕ್ರಮವಾಗಿ
14 ನಿವೇಶನ ಪಡೆದಿದ್ದಾರೆ ಎನ್ನಲಾದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2024ರ ಆಗಸ್ಟ್‌8ರಂದು ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದರು.
ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ ದೇವರಾಜು ಸೇರಿ ಐವರನ್ನು ಆರೋಪಿಗಳನ್ನಾಗಿ ಸೇರಿಸಲಾಗಿತ್ತು.

ಈ ಬೆನ್ನಲ್ಲೇ ರಾಜ್ಯಪಾಲರು ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ತನಿಖೆಗೆ ಅನುಮತಿಸಿದ್ದರು. ಇದನ್ನು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ರಾಜ್ಯಪಾಲರ ನಿರ್ಣಯವನ್ನು ಹೈಕೋರ್ಟ್‌ಎತ್ತಿ ಹಿಡಿಯುತ್ತಿದ್ದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಎಫ್‌ಐಆರ್‌ದಾಖಲಿಸಲು ಆದೇಶಿಸಿತ್ತು.

ಇದರ ಅನ್ವಯ 2024ರ ಸೆಪ್ಟಂಬರ್‌27ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ದಾಖಲಿಸಿ ವಿಚಾರಣೆ ನಡೆಸಿ 2025ರ ಫೆಬ್ರವರಿಯಲ್ಲಿ ಸಿದ್ದರಾಮಯ್ಯ ಸೇರಿ ಇತರೆ ನಾಲ್ವರ ವಿರುದ್ಧ ಬಿ ರಿಪೋರ್ಟ್‌ಸಲ್ಲಿಸಿದ್ದಾರೆ. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಪ್ರತಿಭಟನಾ ಅರ್ಜಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ್ದರು.

 

Share This Article
error: Content is protected !!
";