ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಖಾಸಗಿ ಟಿವಿ ಚಾನೆಲ್ ನ ರಿಯಾಲಿಟಿ ಶೋ ನಡೆಯುವ ಜಾಗದಲ್ಲಿ ನೂರಾರು ಸಿಬ್ಬಂದಿ ಕೆಲಸ ಮಾಲಿನ್ಯ ಆಗುತ್ತಿದೆ ಎಂದು ಕಾರ್ಯಕ್ರಮವನ್ನು ನಿಲ್ಲಿಸಿದ್ದಾರೆ. ಆದರೆ ಕಳೆದ ಹಲವಾರು ವರ್ಷಗಳಿಂದ ನಮ್ಮ ಕೆರೆ ಉಳಿಸಿ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಕಲುಷಿತ ರಾಸಾಯನಿಕ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಹಲವಾರು ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಮನವಿಗಳನ್ನು ದೂರುಗಳನ್ನು ಸಲ್ಲಿಸಿದ್ದರೂ ಯಾಕೆ ನಿಲ್ಲಿಸುತ್ತಿಲ್ಲ. ಒಂದು ರಾಜ್ಯ ಎರಡು ಕಾನೂನು ಏಕೆ ಎಂದು ರೈತ ಮುಖಂಡ ವಸಂತ್ ಕುಮಾರ್ ಪ್ರಶ್ನೆ ಮಾಡಿದ್ದಾರೆ .
ನಗರದ ಪ್ರವಾಸಿ ಮಂದಿರದಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕೊಳಚೆ ನೀರು, ಮನುಷ್ಯನ ಮಲ ಮೂತ್ರ ನೇರವಾಗಿ ಕೆರೆಗೆ ಬಿಡುತ್ತಿದ್ದಾರೆ. ಇದರಿಂದ ಈಗಾಗಲೇ ಚಿಕ್ಕ ತುಮಕೂರು ಕೆರೆ, ದೊಡ್ಡತುಮಕೂರು ಕೆರೆ ಸಂಪೂರ್ಣ ಕಲುಷಿತವಾಗಿ, ಕೇವಲ ಕೆರೆ ನೀರು ಅಷ್ಟೇ ಅಲ್ಲದೆ ಕೊಳವೆ ಭಾವಿಯ ನೀರು ಹಾಗೂ ಶುದ್ಧ ಕುಡಿಯುವ ಘಟಕದ ನೀರು ಸಹ ಯೋಗ್ಯವಾಗಿಲ್ಲ ಎಂಬ ವರದಿ ಇದೆ ಎಂದರು.
ಕಳೆದ ಎರಡು ವರ್ಷಗಳಿಂದ ಎರಡೂ ಗ್ರಾಮ ಪಂಚಾಯಿತಿಗಳಿಗೆ ಕುಡಿಯಲು ಲಕ್ಷಾಂತರ ಖರ್ಚು ಮಾಡಿ ಜಕ್ಕಲಮಡಗು ನೀರು ಸರಬರಾಜು ಮಾಡುತ್ತಿದ್ದಾರೆ. ಈಗ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬೇರೆ ಪಂಚಾಯ್ತಿಗಳಿಂದ ನೀರು ನೀರು ನೀಡುವ ಪರಿಸ್ಥಿತಿ ಎದುರಾಗಿದೆ ದಯಮಾಡಿ ಕೊಳಚೆ ನೀರು ಬಿಟ್ಟಿರುವ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ನಮ್ಮ ಕೆರೆ ಹಾಗೂ ಜಾಲಾನ್ಮೂಲಗಳನ್ನು ಉಳಿಸಿ ಎಂದರು.
ಸುದ್ದಿಗೋಷ್ಠಿಯಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೊರಾಟ ಸಮಿತಿಯ ವಸಂತ್ ಕುಮಾರ್, ರಮೇಶ್, ಸತೀಶ್, ಕಾಳೆಗೌಡ, ಗೋಪಾಲಕೃಷ್ಣ, ವಿಜಿ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

