ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ರಸ್ತೆ ಗುಂಡಿ ಮತ್ತೊಂದು ಬಲಿ ಪಡೆದುಗೊಂಡಿದೆ. ಕಳೆದ ಸೆಪ್ಟೆಂಬರ್ 29ರಂದು ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ರಕ್ಕಸ ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್, ಕಾಲೇಜಿಗೆ ತೆರಳುತ್ತಿದ್ದ ಧನುಶ್ರೀ ಎಂಬ ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಧನುಶ್ರೀ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಳು.
ಈ ಪ್ರಕರಣ ಮಾಸುವ ಮುನ್ನವೇ ಗುಂಜೂರಿನ ಡೀನ್ಸ್ ಅಕಾಡೆಮಿ ಬಳಿ ಮತ್ತೊಂದು ದುರ್ಘಟನೆ ನಡೆದಿದೆ. ರಸ್ತೆ ಹದಗೆಟ್ಟಿದ್ದರಿಂದ ನಿಯಂತ್ರಣ ತಪ್ಪಿದ ಶಾಲಾ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಈ ಹಿನ್ನೆಲೆಯಲ್ಲಿ ಬೈಕ್ ಸವಾರ ದುರ್ಮರಣ ಹೊಂದಿದ್ದಾನೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಥಳೀಯ ಬಿಜೆಪಿ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ನೂತನವಾಗಿ ಜಾರಿಗೆ ಬಂದಿರುವ ಜಿಬಿಎಗೆ ಟ್ವಿಟ್ಟರ್ ಎಕ್ಸ್ ನಲ್ಲಿ ಫೋಟೋ ಟ್ಯಾಗ್ ಮಾಡಿ ಸಿವಿಕ್ ಅಸೋಸಿಯೇಷನ್ ಫೋರಂ ಆಕ್ರೋಶ ಹೊರಹಾಕಿದೆ.

