ಜಯಪ್ರಕಾಶ್ ನಾರಾಯಣ್ ಅವರ ಜನ್ಮದಿನಾಚರಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಗ್ರೇಟರ್ ಬೆಂಗಳೂರು ಅಥಾರಿಟಿ ವಾರ್ಡ್ ಗಳ ವಿಭಜನೆಯಲ್ಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಜಿಬಿಎ ಚುನಾವಣೆಗೆ ಜೆಡಿಎಸ್ ಪಕ್ಷದ ಆಕಾಂಕ್ಷಿಗಳ ಪಟ್ಟಿ ಸಿದ್ಧತೆ ಮಾಡುವ ವಿಚಾರವಾಗಿ ಶನಿವಾರ ಪಕ್ಷದ ಕಚೇರಿಯಲ್ಲಿ  ಜೆಪಿ ಭವನದಲ್ಲಿ ಮಾಜಿ ಶಾಸಕರು ಹಾಗೂ

ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಅಧ್ಯಕ್ಷ ಎಚ್ಎಂ ರಮೇಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಮುಖಂಡರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಪ್ರಮುಖರ  ಸಭೆಯು ನಡೆಯಿತು.

- Advertisement - 

ಈ ಸಭೆಯಲ್ಲಿ 50 ಜನ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ ಸದರಿ ಪಟ್ಟಿಯನ್ನು ವರಿಷ್ಠರಿಗೆ ಪಕ್ಷದ ವರಿಷ್ಠರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಲೋಕ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಸಭೆಯಲ್ಲಿ ಶಾಸಕ ಟಿ. ಎನ್. ಜವರಾಯಿಗೌಡ, ಮಾಜಿ ಸಚಿವೆ ಲೀಲಾ ದೇವಿ ಆರ್ ಪ್ರಸಾದ್, ಮಾಜಿ ಶಾಸಕ ಕೆಎ ತಿಪ್ಪೇಸ್ವಾಮಿ, ಪಕ್ಷದ ಜಿಲ್ಲಾ ಚುನಾವಣಾಧಿಕಾರಿ ಶೈಲಾ ಸಂತೋಜಿ ರಾವ್, ಬಿಬಿಎಂಪಿಯ ಮಾಜಿ ಉಪ ಮಹಾಪೌರ ಬಿ.ಭದ್ರೇಗೌಡ, ವಿರೋಧ ಪಕ್ಷದ ಮಾಜಿ ಸದಸ್ಯ ಟಿ. ತಿಮ್ಮೇಗೌಡ, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಎಂ ಮುನಿಸ್ವಾಮಿ, ರಜಿನಿ ಮೂರ್ತಿ,

- Advertisement - 

ಪಕ್ಷದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಎ ಎಂ ಪ್ರವೀಣ್ ಕುಮಾರ್, ಚೆನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ತಾರಾ ಲೋಕೇಶ್ ಹಾಗೂ ಪಕ್ಷದ ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ಮಹಿಳಾ ವಿಭಾಗದ ಪದಾಧಿಕಾರಿಗಳು ಹಾಗೂ ಇನ್ನಿತರ ವಿಭಾಗಗಳ ಅಧ್ಯಕ್ಷರು ಹಾಗೂ  ಮುಖಂಡರು ಮತ್ತು ಕಾರ್ಯಕರ್ತರು  ಭಾಗವಹಿಸಿದ್ದರು.

Share This Article
error: Content is protected !!
";