ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಿಪಟೂರಿನ ಗುರುಕುಲ ಕಲ್ಯಾಣ ಮಂಟಪದಲ್ಲಿಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಜರುಗಿದ ʼಗಾಂಧಿ ಸ್ಮೃತಿ ಮತ್ತು ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮʼದಲ್ಲಿ ಪಾಲ್ಗೊಂಡು, ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ, ಶಾಸಕ ಕೆ. ಷಡಕ್ಷರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಮರನಾಥ್‌ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

