ಸಚಿವ ಸಂಪುಟ ವಿಸ್ತರಣೆ ಆಗಲಿದೆ-ಯತೀಂದ್ರ

News Desk

ಚಂದ್ರವಳ್ಳಿ ನ್ಯೂಸ್, ರಾಯಚೂರು:
ಸಚಿವ ಸಂಪುಟ ವಿಸ್ತರಣೆ ಆಗಲಿದೆ ಅಂತ ಹಿರಿಯ ಸಚಿವರುಗಳು ಸೇರಿದಂತೆ ಮುಖ್ಯಮಂತ್ರಿ ಅವರು ಸೂಚ್ಯವಾಗಿ ತಿಳಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು
, ಡಿಸೆಂಬರ್​ ತಿಂಗಳಲ್ಲಿ ಬಹುಶಃ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.

ಸಿಎಂ ಸಚಿವರ ಔತಣಕೂಟದ ನೆಪದಲ್ಲಿ ಬಿಹಾರಕ್ಕೆ ಯಾರ‍್ಯಾರು ಎಷ್ಟೆಷ್ಟು ಕೊಡಬೇಕು ಅಂತ ನಿರ್ಧರಿಸಲು ಕರೆದಿದ್ದಾರೆ ಎಂಬ ವಿಪಕ್ಷ ನಾಯಕ ಆರ್‌. ಅಶೋಕ್​ ಅವರ ಹೇಳಿಕೆ ಕುರಿತು ಟೀಕಿಸಿದ ಮಾತನಾಡಿದ ಅವರು ನಮ್ಮ ಪಕ್ಷದಲ್ಲಿ ನಡೆಯೋದು ಅವರಿಗೆ ಹೇಗ್ರಿ ಗೊತ್ತಾಗುತ್ತೆ. ಅವರು ಏನಾದ್ರು ಹೇಳ್ತಾರೆ, ಅವರು ಹೇಳೋದು ನಿಜ ಆಗುತ್ತಾ ಎಂದು ಕಿಡಿಕಾರಿದರು.

- Advertisement - 

ಸಿಎಂ ಅವರು ಆಗಾಗ್ಗೆ ಔತಣಕೂಟ ಆಯೋಜಿಸುತ್ತಿರುತ್ತಾರೆ. ಎಷ್ಟೋ ಬಾರಿ ಸಿಎಲ್​​ಪಿ ಮೀಟಿಂಗ್ ವೇಳೆ ಕರೆದಿದ್ದಾರೆ, ಮನೆಗೂ ಕರೆದಿದ್ದಾರೆ. ಶಾಸಕರು, ಸಚಿವರನ್ನು ಕರೆದಿದ್ದಾರೆ. ಅದರಲ್ಲಿ ಬಿಹಾರ ಚುನಾವಣೆ ಕೂಡ ಚರ್ಚೆ ಆಗಬಹುದು. ಅದರ ಅರ್ಥ ದುಡ್ಡಿನ ವಿಚಾರ ಅಂತಲ್ಲ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಏನಿದೆ ಹಾಗೂ ಅವರವರ ಇಲಾಖೆಗಳು ಹೇಗೆ ನಡೀತಿವೆ. ಸಮಸ್ಯೆ ಇದೆಯಾ ಅನ್ನೋದನ್ನು ಕೇಳಿ, ಬಿಹಾರ ಎಲೆಕ್ಷನ್ ಬಗ್ಗೆಯೂ ಮಾತನಾಡಿರಬಹುದು ಎಂದು ಯತೀಂದ್ರ ಹೇಳಿದರು.

ರಾಜ್ಯದಲ್ಲಿ ನವೆಂಬರ್ ತಿಂಗಳ ನಂತರ ರಾಜಕೀಯ ಕ್ರಾಂತಿಯಾಗಿ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಶಾಸಕರ ಹೇಳಿಕೆ ಕುರಿತು ಮಾತನಾಡಿದ ಅವರು, ನಿಜವಾಗಿ ಏನು ಮಾತುಕತೆ ನಡೆದಿದೆ ಎಂಬುದು ಯಾರಿಗೂ ತಿಳಿದಿಲ್ಲ. ಎಲ್ಲರೂ ಊಹಾಪೋಹದ ಆಧಾರದಲ್ಲಿ ಹೇಳುತ್ತಾರೆ. ನನಗೆ ಗೊತ್ತಿರೋ ಹಾಗೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಪದವಿಗೆ ಅರ್ಹತೆ ಇರೋರು ಪಕ್ಷದಲ್ಲಿ ಬಹಳಷ್ಟು ಜನ ಇದ್ದಾರೆ. ಹೀಗಾಗಿ ಆಗಾಗ ಕ್ಲೇಮ್ ಮಾಡುತ್ತಾರೆ, ಅದರಲ್ಲೇನು ತಪ್ಪಿಲ್ಲ ಎಂದು ಯತೀಂದ್ರ ಹೇಳಿದರು.

- Advertisement - 

ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ವಿರುದ್ಧ ಕಮಿಷನ್ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ಈ ಪ್ರತಾಪ್ ಸಿಂಹ ಯಾರ್ರೀ, ಆತ ರಾಜಕೀಯದಲ್ಲಿ ಪ್ರಸಿದ್ಧಿ ಆಗಿರಬೇಕು. ಹಾಗಾಗಿ, ಸುಮ್ನೆ ಸಾಕ್ಷಿ, ಆಧಾರ ಇಲ್ಲದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಅವರ ಪಕ್ಷವೇ ಅವರನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ನಾವ್ಯಾಕೆ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಯತೀಂದ್ರ ಟಾಂಗ್ ನೀಡಿದರು.

ಎಲ್ಲಿವರೆಗೂ ಸಿದ್ದರಾಮಯ್ಯ ಅವರು ಸಿಎಂ ಆಗಿರ್ತಾರೋ, ಅಲ್ಲಿವರೆಗೂ ಅವರ ಸಂಪುಟದಲ್ಲಿ ನನ್ನ ಮಂತ್ರಿ ಮಾಡಲ್ಲ ಅಂತ ಹೇಳಿದ್ದಾರೆ. ಹಾಗಾಗಿ ನನ್ನ ಮಂತ್ರಿ ಸ್ಥಾನದ ಬಗ್ಗೆ ಪ್ರಶ್ನೆಯೇ ಬರಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದ ರಂಗಮಂದಿರಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ತೆರಳುವ ವೇಳೆ ಬೃಹತ್ ಮೆರವಣಿಗೆ ಆಯೋಜಿಸಲಾಗಿತ್ತು. ಈ ಮೆರವಣಿಗೆಯಲ್ಲಿ ವಿಧಾನ ಪರಿಷತ್​ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಅಭಿಮಾನಿಗಳು ಸಂಭ್ರಮಿಸಿದರು.

 

Share This Article
error: Content is protected !!
";