ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ದೇವಾಂಗ ಸಂಘದಲ್ಲಿ ಕೊಂಡೆವೂರು ಮಠದ ಶ್ರೀ ನಿತ್ಯಾನಂದ ಯೋಗಾಶ್ರಮದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನದ ಸವಿನೆನಪಿಗಾಗಿ ಆಯೋಜಿಸಲಾಗಿದ್ದ ಶ್ರೀ ವಿಷ್ಣು ಸಹಸ್ರನಾಮ ಹವನ ಕಾರ್ಯಕ್ರಮ ಹಾಗೂ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮದಲ್ಲಿ ವಿ.ಸೋಮಣ್ಣ ಅವರು ಪಾಲ್ಗೊಂಡಿದ್ದರು.
ಹಂಪಿ ಹೇಮಕೂಟದ ಪರಮಪೂಜ್ಯ ಶ್ರೀ ಶ್ರೀ ದಯಾನಂದಪುರಿ ಸ್ವಾಮೀಜಿ ಹಾಗೂ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ
ಸಂಸದ ಪಿ.ಸಿ.ಮೋಹನ್, ಖ್ಯಾತ ಚಲನಚಿತ್ರ ನಟರು ಹಾಗೂ ರಾಜ್ಯಸಭಾ ಸಂಸದ ಜಗ್ಗೇಶ್, ನಿವೃತ್ತ ಐಪಿಎಸ್ ಅಧಿಕಾರಿ ಡಾ. ಸಿ.ಕೆ ರಾಮಮೂರ್ತಿ, ಧರ್ಮಪ್ರಸಾದ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

