ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು! ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದರು.

ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ, ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ, ಬಂದ್ ಮಾಡುತ್ತಿದ್ದಾರೆ.

- Advertisement - 

ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ಎಸ್ ಬಗ್ಗೆ ಸಿಎಂಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಆರ್ ಎಸ್ಎಸ್ ನಿಷೇಧ ಮಾಡುವ ನಿಮ್ಮ ಗೀಳು ಬಿಡಿ. ಈ ಕೂಡಲೇ ಮುಖ್ಯಮಂತ್ರಿಗಳ ಮನವೊಲಿಸಿ ನೆರೆ ಪೀಡಿತ ಪ್ರದೇಶಗಳಲ್ಲಿ ಹಸಿರು ಬರ ಘೋಷಣೆ ಮಾಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ.

- Advertisement - 

ಜನ ನಿಮಗೆ ಅಧಿಕಾರ ಕೊಟ್ಟಿರೋದು ಬರೀ ರಾಜಕಾರಣ ಮಾಡೋದಕ್ಕೆ ಅಲ್ಲ. ಆರ್ ಎಸ್ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಹಿಸಿ ಎಂದು ಅಶೋಕ್ ತಾಕೀತು ಮಾಡಿದರು.

 

 

Share This Article
error: Content is protected !!
";