ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತ್ತೊಮ್ಮೆ ಸಾರಿಗೆ ಮುಷ್ಕರದ ಬರೆ! ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ದೀಪಾವಳಿ ಉಡುಗೊರೆ! ಎಂದು ವಿಪಕ್ಷ ನಾಯಕ ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಬಾರಿ ದೀಪಾವಳಿ ಹಬ್ಬಕ್ಕೆ ಜನಸಾಮಾನ್ಯರು ಊರಿಗೆ ಹೋಗಲು ಬಸ್ಸಿಗಾಗಿ ಪರದಾಡಬೇಕಾದ ಪರಿಸ್ಥಿತಿ ಎದುರಾಗುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ.
ತಮ್ಮ ಬೇಡಿಕೆ ಈಡೇರಿಸದಿದ್ದರೆ ಮತ್ತೊಮ್ಮೆ ಅಕ್ಟೋಬರ್ 15ರಿಂದ ಮುಷ್ಕರ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರು ಎಚ್ಚರಿಕೆ ನೀಡಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

