ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಚಿತ್ರದುರ್ಗ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಡಾ.ಜಿ ಸವಿತಾ ಅವರು ಸೋಮವಾರ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಇವರು ಶಿವಮೊಗ್ಗದ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ರಾಜ್ಯ ಸರ್ಕಾರ ರಾಜ್ಯ ತೋಟಗಾರಿಕೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 29 ಮಂದಿ ಉಪನಿರ್ದೇಶಕರು ವೃಂದದ ಅಧಿಕಾರಿಗಳಿಗೆ ಜಂಟಿ ನಿರ್ದೇಶಕರ ವೃಂದಕ್ಕೆ ಬಡ್ತಿ ನೀಡಿ ಅಕ್ಟೋಬರ್-13 ರಂದು ತೋಟಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ್ ಅವರು ಆದೇಶ ಮಾಡಿದ್ದರು.
ಈ ಆದೇಶದ ಅನ್ವಯ ಡಾ.ಜಿ ಸವಿತಾ ಅವರು ಚಿತ್ರದುರ್ಗ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾಗಿ ಕರ್ತವ್ಯ ವಹಿಸಿಕೊಂಡಿದ್ದಾರೆ. ಈ ಮೂದಲು ಅವರು ಹಿರಿಯೂರು ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರಾಗಿ, ಚಿತ್ರದುರ್ಗ ಮತ್ತು ತುಮಕೂರು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು, ಸಹಾಯಕ ನಿರ್ದೇಶಕರು, ತಾಂತ್ರಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಡಾ.ಎಂ.ಜಿ ಗೋವಿಂದಯ್ಯ ಅವರು ಸವಿತಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಿಸುವುದರ ಜೊತೆಯಲ್ಲಿ ರೈತ ಸ್ನೇಹಿಯಾಗಿ ಕೆಲಸ ಮಾಡುವಂತೆ ಆರೈಸಿದ್ದಾರೆ.

