ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಂ. ರಾಮಪ್ಪ ರವರನ್ನು ಬೆಂಗಳೂರಿನ ಕಚೇರಿಯಲ್ಲಿ ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿದ ನೂತನ ಅಧ್ಯಕ್ಷರು ಮಾತನಾಡಿ ನಾನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿಗೆ ಸೇರಿದವನಾಗಿದ್ದು ತಾಲೂಕ್ ಮತ್ತು ಜಿಲ್ಲೆಯ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿ ಅರಿತುಕೊಂಡಿದ್ದೇನೆ.
ನನ್ನ ಅಧಿಕಾರ ಅವಧಿಯಲ್ಲಿ ಜಿಲ್ಲೆಯ ಮತ್ತು ರಾಜ್ಯದ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ನನ್ನ ಸೇವೆಯನ್ನು ಗುರುತಿಸಿ ಸರ್ಕಾರ ನನ್ನನ್ನು ನಿಗಮದ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಸರ್ಕಾರಕ್ಕೆ ನಾನು ಚಿರಋಣಿಯಾಗಿರುತ್ತೇನೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ, ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ತಿಮ್ಮಣ್ಣ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಇತರರು ಉಪಸ್ಥಿತರಿದ್ದರು.

