ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು ಎಂದು ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿದೆ.
ಕರ್ನಾಟಕ ಕಾಂಗ್ರೆಸ್
ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿಗೆ ಗ್ರಹಣ ಹಿಡಿಸಿ ಬಿಟ್ಟಿದೆ. ಬೆಂಗಳೂರಿನ ಗುಂಡಿಗಳು, ಐಟಿ  ಸಚಿವ ಪ್ರಿಯಾಂಕ್ ಖರ್ಗೆ  ನಿರ್ಲಕ್ಷತನದಿಂದ 1.3ಲಕ್ಷ ಕೋಟಿ ಹೂಡಿಕೆಯ ಯೋಜನೆಯೊಂದು ರಾಜ್ಯದ ಕೈತಪ್ಪಿದ್ದು ಕರ್ನಾಟಕಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಜಾಗತಿಕ ಟೆಕ್ ದಿಗ್ಗಜ #Google ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸುಮಾರು 1.3 ಲಕ್ಷ ಕೋಟಿ ರೂ. ಹೂಡಿಕೆಯೊಂದಿಗೆ ‘#AIHub ಸ್ಥಾಪಿಸಲು ಆಂದ್ರ ಪ್ರದೇಶ ಸರಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.  30,000 ಉದ್ಯೋಗ ಜೊತೆಗೆ ವಾರ್ಷಿಕ 10,000 ಕೋಟಿ ರೂ. ಆದಾಯಗಳಿಸ ಬಹುದಾಗಿದ್ದ ಯೋಜನೆಯ ಕರ್ನಾಟಕದ ಕೈತಪ್ಪಿ ಅನ್ಯ ರಾಜ್ಯಕ್ಕೆ ಹೋಗಿದೆ ಎಂದು ಜೆಡಿಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

- Advertisement - 

ಗಾರ್ಡನ್ ಸಿಟಿಯ ರಸ್ತೆ ಗುಂಡಿ, ಕಸ ಹಾಗೂ ಮೂಲ ಸೌಕರ್ಯ ಸಮಸ್ಯೆ ಕಾರಣಕ್ಕೆ ಕಾರ್ಪೊರೇಟ್ ವಲಯದ ಕೆಂಗಣ್ಣಿಗೆ ಗುರಿಯಾಗಿರುವ ಸಮಯದಲ್ಲೇ ಜಾಗತಿಕ ಬೃಹತ್ ಹೂಡಿಕೆಯ ಯೋಜನೆ ನೆರೆ ರಾಜ್ಯ‌ಆಂದ್ರ ಪಾಲಾಗಿದೆ.

ಉದ್ಯಮ ಸ್ನೇಹಿ ವಾತಾವರಣ ಕಲ್ಪಿಸುವುದನ್ನು ಬಿಟ್ಟು ಉದ್ಯಮಿಗಳು ಬೆಂಗಳೂರು ಬಿಟ್ಟು ಹೋದರೆ ಹೋಗಲಿ ಎಂದು ಧಮ್ಕಿ ಹಾಕುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್, ನಿಷ್ಪ್ರಯೋಜಕ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಗೂಗಲ್ AI ಹಬ್ ಕರ್ನಾಟಕದ ಕೈತಪ್ಪಲು‌ನೀವು ಮತ್ತು ನಿಮ್ಮ ಸರ್ಕಾರದ ನಿರ್ಲಕ್ಷತನವೇ ಕಾರಣ ಎಂದು ಜೆಡಿಎಸ್ ಆರೋಪಿಸಿದೆ.

- Advertisement - 

 

 

 

 

Share This Article
error: Content is protected !!
";