ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಆರ್​​ ಎಸ್​ಎಸ್ ಕಾರ್ಯಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳು ಬಂದಿದ್ದ ಆ ಕರೆಗಳ ಹಿಂದಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪನನ್ನು ಲಾತೂರ್​ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement - 

ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ ಎನ್ನಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ನಿಂದಿಸಿದ್ದ ವ್ಯಕ್ತಿಯ ವಿರುದ್ಧ ಕಾಂಗ್ರೆಸ್ ಮುಖಂಡ ಮನೋಹರ್ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

- Advertisement - 

ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರ ಪೊಲೀಸರು ಮತ್ತು ಕಲಬುರಗಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ದಿನೇಶ್​ ನನ್ನು ಲಾತೂರ್​ ನಲ್ಲಿ ಬಂಧಿಸಿದ್ದು
, ಇಂದು ರಾತ್ರಿ ದಿನೇಶನನ್ನು ಸದಾಶಿವನಗರ ಠಾಣೆಗೆ ಕರೆತರುವ ಸಾಧ್ಯತೆಗಳಿವೆ.

ಸರ್ಕಾರಿ ಶಾಲೆ, ಕಾಲೇಜು ಆವರಣಗಳಲ್ಲಿ ಆರ್‌ಎಸ್ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ವಿವಾದ ಭುಗಿಲೆದ್ದಿತ್ತು.

ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳು ಬರುತ್ತಿವೆ. ಕರೆ ಮಾಡಿದವರು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದಾರೆ. ದಿನೇಶ್ ಧಮ್ಕಿ ಹಾಕಿರುವುದನ್ನು ಸ್ವತಃ ಪ್ರಿಯಾಂಕ್ ಖರ್ಗೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಈ ಕುರಿತಾಗಿ ಅವರು ಟ್ವೀಟ್ ಮಾಡಿದ್ದ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್ ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ ಎಂದು ವಿಡಿಯೋ ಹಂಚಿಕೊಂಡಿದ್ದರು.

 

 

 

Share This Article
error: Content is protected !!
";