ಜಿಲ್ಲಾ ಚುನಾವಣಾಧಿಕಾರಿಯಾಗಿ ಚಿಕ್ಕಪ್ಪನಹಳ್ಳಿ ಷಣ್ಮುಖ ನೇಮಕ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಚಿತ್ರದುರ್ಗ ಜಿಲ್ಲಾ ಘಟಕದ 2025-28ನೇ ಅವಧಿಯ ಚುನಾವಣೆ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ನೇಮಕವಾಗಿದ್ದು, ಚುನಾವಣಾ ಕಚೇರಿ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪನವರು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿಯಾಗಿ ಇದುವರೆಗೂ ಕರ್ತವ್ಯನಿರ್ವಹಿಸಿದ್ದು, ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಂಡ ಹಿನ್ನೆಲೆಯಲ್ಲಿ,

- Advertisement - 

ಇವರ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement - 

Share This Article
error: Content is protected !!
";