ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದರ್ಶನ ಭಾಗ್ಯದಿಂದ ನಾನು ಧನ್ಯನಾದೆ. ಕುಟುಂಬ ಸಮೇತನಾಗಿ ಹಾಸನಕ್ಕೆ ತೆರಳಿ ಅಮ್ಮನವರನ್ನು ದರ್ಶನ ಮಾಡಿ ಪೂಜೆ ಸಲ್ಲಿಸಿದೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ನಾಡಿಗೆ ಶುಭವನ್ನುಂಟು ಮಾಡಲಿ. ಎಲ್ಲೆಡೆ ಸುಖ-ಶಾಂತಿ, ನೆಮ್ಮದಿ-ಸಮೃದ್ಧಿ ನೆಲೆಸುವಂತೆ ಮಾಡಲಿ. ಪ್ರತಿಯೊಬ್ಬರಿಗೂ ಉತ್ತಮ ಆಯುರಾರೋಗ್ಯ ಕರುಣಿಸಿ ಸುಖ ಸಮೃದ್ಧಿಯನ್ನು ನೀಡಲಿ ಎಂದು ಆ ತಾಯಿಯಲ್ಲಿ ಅರಿಕೆ ಮಾಡಿಕೊಂಡೆ ಎಂದು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮುಖಂಡರು ನನ್ನ ಜತೆಯಲ್ಲಿದ್ದು ಅಮ್ಮನವರ ಅನುಗ್ರಹಕ್ಕೆ ಪಾತ್ರರಾದರು.

