ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಕ್ತಿಪೀಠಗಳಲ್ಲಿ ಒಂದಾದ ಪವಿತ್ರ ಪುಣ್ಯಕ್ಷೇತ್ರವಾದ ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಸ್ಥಾನಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿ, ತಾಯಿ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ವರ್ಷದಲ್ಲಿ ಒಂದೇ ಬಾರಿ ದರ್ಶನ ನೀಡುವ ತಾಯಿ ಹಾಸನಾಂಬೆ, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಿ, ಅನೇಕ ಪವಾಡಗಳ ಮೂಲಕ ಜನಮನದಲ್ಲಿ ನೆಲೆಸಿದ್ದಾಳೆ.
ಜಗನ್ಮಾತೆಯ ಸನ್ನಿಧಿಯಲ್ಲಿ ನಾಡಿನ ಕಲ್ಯಾಣ, ಸಮೃದ್ಧಿ ಹಾಗೂ ಶಾಂತಿಯಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಹಾಸನಾಂಬ ದೇವಿಯ ಕೃಪೆ ಎಲ್ಲರ ಮೇಲಿರಲಿ ಎಂದು ನಿಖಿಲ್ ಕೋರಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರು, ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರು , ಪಕ್ಷದ ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.

