ಲಾರಿ ಬಸ್ ಡಿಕ್ಕಿ ಪ್ರಯಾಣಿಕರಿಗೆ ಗಂಬೀರ ಗಾಯ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿ ನಾಯಕರಂಡನಹಳ್ಳಿ ಬಳಿ ಹಾದು ಹೋಗುವ ಹಿಂದೂಪುರ- ಯಲಹಂಕ ಹೆದ್ದಾರಿಯಲ್ಲಿ ಕೆಎಸ್ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

ಗೌರಿಬಿದನೂರು ಕಡೆಯಿಂದ ಬೆಂಗಳೂರಿನತ್ತ ಕೆಎಸ್ಆರ್ ಟಿಸಿ‌ ಬಸ್ ಹಾಗೂ ಕಲ್ಲಿದ್ದಲು ತುಂಬಿದ್ದ ಲಾರಿ ಬರುತ್ತಿದ್ದವು‌. ಮುಂದೆ ಕಲ್ಲಿದ್ದಲು ತುಂಬಿದ್ದ ಲಾರಿ ಹೋಗುತ್ತಿತ್ತು.

- Advertisement - 

ಹಿಂಬದಿಯಿಂದ ಕೆಎಸ್ ಆರ್ ಟಿಸಿ‌ ಬಸ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಎಸ್ಆರ್ ಟಿಸಿ‌ ಬಸ್ ನಲ್ಲಿದ್ದ 10ಕ್ಕೂ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆ ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. 

ಘಟನೆಯಲ್ಲಿ ಬಸ್ಸಿನಲ್ಲಿ ಮಗು ಸಿಲುಕಿಕೊಂಡಿತ್ತು ಸತತ ಒಂದು ಗಂಟೆಗಳ ಕಾರ್ಯಾಚರಣೆ ಬಳಿ ಮಗುವನ್ನು ರಕ್ಷಣೆ ಮಾಡಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.

- Advertisement - 

 

 

 

 

 

Share This Article
error: Content is protected !!
";