ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಉದ್ಘಾಟಿಸಿದ ಕುಮಾರಸ್ವಾಮಿ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನವನ್ನು ಉದ್ಘಾಟನೆ ಮಾಡಲಾಯಿತು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಕೇಂದ್ರ ಸರ್ಕಾರದ ಮಂತ್ರಿಗಳಾದ ಕುಮಾರಿ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಸಂಸ್ಥೆಯ ನಿರ್ದೇಶಕ ಡಾ. ಎಸ್.ಎನ್. ಸುಶೀಲ್ ಅವರು ಸೇರಿದಂತೆ ಅನೇಕ ಕೃಷಿ ವಿಜ್ಞಾನಿಗಳು, ರೈತರು ಪಾಲ್ಗೊಂಡಿದ್ದರು.

