ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು, ಲೇಖಕಿಯರು ಹಾಗೂ ಮಹಿಳಾ ಹೋರಾಟಗಾರ್ತಿಯರ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿಯ ಸ್ವಾತಂತ್ರ್ಯ ರಕ್ಷಣೆ, ಹಿಂದಿನ ಪ್ರಕರಣಗಳು ಹಾಗೂ ಸಾಕ್ಷಿಗಳ ಸಾವಿನ ಪ್ರಕರಣಗಳ ಮರುತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ಹಾಗೂ ಮಹಿಳೆಯರ ಸುರಕ್ಷತೆಗಾಗಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವುದು ಇನ್ನು ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ,
ಮನವಿ ಸಲ್ಲಿಸಿ, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಉಗ್ರಪ್ಪ ಸಮಿತಿಯ ವರದಿ ಜಾರಿಗೆ ಮುಂದಾಗಿರುವ ಸರ್ಕಾರದ ನಿಲುವಿಗೆ ಮಹಿಳೆಯರ ನಿಯೋಗ ಧನ್ಯವಾದ ಸಲ್ಲಿಸಿದರು.

