ಪತ್ರಕರ್ತರ ಸಂಘದ ಚುನಾವಣೆ ಸಲ್ಲಿಕೆಯಾಗದ ನಾಮಪತ್ರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ
2025–28ನೇ ಅವಧಿಯ ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 23ರಂದು ಗುರುವಾರ ಯಾವುದೇ ನಾಮಪತ್ರ ಸಲ್ಲಿಕೆ ಆಗಿಲ್ಲ.
ಅಕ್ಟೋಬರ್ 19 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಇದುವರೆಗೆ ಯಾವ ಹುದ್ದೆಗೂ ನಾಮಪತ್ರ ಸಲ್ಲಿಕೆಯಾಗಿಲ್ಲ.

ಅಕ್ಟೋಬರ್ 27ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಕಚೇರಿ ಅವಧಿಯಲ್ಲಿ ಬಂದು ನಾಮಪತ್ರ ಸಲ್ಲಿಸಬಹುದು. ಅ. 28ರಂದು ನಾಮಪತ್ರಗಳ ಪರಿಶೀಲನೆ, ಅ. 30ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

- Advertisement - 

ಅಂದೇ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಅಗತ್ಯಬಿದ್ದಲ್ಲಿ ನವೆಂಬರ್ 9ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರ ವರೆಗೆ ಮತದಾನ ನಡೆಯಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಮುಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";