ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿವಿ ಸಾಗರ ಡ್ಯಾಂ ಕ್ರಸ್ಟ್ ಗೇಟ್ ಓಪನ್ ಮಾಡಿಸಿದ್ದಕ್ಕೆ ಹೊಸದುರ್ಗ ಶಾಸಕ ಬಿ.ಜಿ ಗೋವಿಂದಪ್ಪ ವಿರುದ್ದ ಹಿರಿಯೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಮಾಜಿಕ ಹೋರಾಟಗಾರ ರಮೇಶ್ ಅವರು ಪೊಲೀಸರಿಗೆ ಗೋವಿಂದಪ್ಪ ಅವರ ವಿರುದ್ಧ ದೂರು ನೀಡಲಾಗಿದೆ. ಅತಿ ಮುಖ್ಯವಾಗಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರ ಅನುಮತಿ ಪಡೆಯದೇ ಕ್ರಸ್ಟ್ ಗೇಟ್ ಓಪನ್ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಆದ್ದರಿಂದ ಶಾಸಕ ಬಿ.ಜಿ ಗೋವಿಂದಪ್ಪ ವಿರುದ್ದ ಪ್ರಕರಣ ದಾಖಲಾಗಿದ್ದು ಅಧಿಕಾರಿ ದುರುಪಯೋಗ ಮಾಡಿಕೊಂಡು ಗೇಟ್ ಓಪನ್ ಮಾಡಿದ್ದಾರೆಂಬ ಆರೋಪ ಶಾಸಕ ಬಿ.ಜಿ ಗೋವಿಂದಪ್ಪ ಇವರ ವಿರುದ್ಧ ಇದ್ದು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

