ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳಾದ ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಪ್ರದೇಶಗಳು ಮುಖ್ಯವಾಗಿವೆ. ಕಬ್ಬನ್ ಪಾರ್ಕ್
ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕಬ್ಬನ್ ಪಾರ್ಕ್​ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಅಹವಾಲು ಸ್ವೀಕರಿಸಿ ಮಾತನಾಡಿದರು.

- Advertisement - 

ಕಬ್ಬನ್ ಪಾರ್ಕ್ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ನಾಗರಿಕರು ಮನವಿ ಮಾಡಿದ್ದಾರೆ. ಅವರ ಮನವಿಯಂತೆ ಮಿಕ್ಕ ಅನುದಾನವನ್ನು ತೋಟಗಾರಿಕೆ ಇಲಾಖೆಯಿಂದ ನೀಡುವಂತೆ ವ್ಯವಸ್ಥೆ ಮಾಡಲಾಗುವುದು. ಈ ಉದ್ಯಾನದ ಆವರಣದಲ್ಲಿ ಯಾವುದೇ ರೀತಿಯ ನಿರ್ಮಾಣ ಕೆಲಸಗಳಿಗೆ ಸರ್ಕಾರ ಆಸ್ಪದ ನೀಡುವುದಿಲ್ಲ ಎಂದು ಡಿಸಿಎಂ ಭರವಸೆ ನೀಡಿದರು.

ಕಬ್ಬನಾ ಪಾರ್ಕ್ ಮತ್ತು ಲಾಲ್ ಬಾಗ್ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು ಏನು ಕೆಲಸ ಮಾಡಬೇಕು ಅದನ್ನು ಮಾಡುತ್ತೇವೆ ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.

- Advertisement - 

ಸರ್ಕಾರದ ವತಿಯಿಂದಲೇ ಉದ್ಯಾನದಲ್ಲಿ ಒಂದಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಆಲೋಚನೆ ಮಾಡಲಾಗುವುದು. ನಾನು ನೋಡಿದಂತೆ ಕಬ್ಬನ್ ಪಾರ್ಕ್ ಅನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಲಾಗಿದೆ.

ನಾನು ಮದುವೆಯಾದ ಹೊಸತರಲ್ಲಿ ನನ್ನ ಹೆಂಡತಿಯನ್ನ ಕಬ್ಬನ್‌ಪಾರ್ಕ್ ತೋರಿಸಲು ಕರೆದುಕೊಂಡು ಬಂದಿದ್ದೆ. ವಿದ್ಯಾರ್ಥಿ ನಾಯಕನಾಗಿದ್ದಾಗಲೂ ಇಲ್ಲಿಗೆ ಬಂದು ಸಮಯ ಕಳೆಯುತ್ತಿದ್ದೆ ಎಂದು ಡಿಸಿಎಂ ಸ್ಮರಿಸಿದರು.

ನಗರದಾದ್ಯಂತ ಇರುವ ಅರಣ್ಯ ಇಲಾಖೆ ಜಾಗಗಳಲ್ಲಿ ಅರಣ್ಯ ಇಲಾಖೆ ಜೊತೆ ಚರ್ಚೆ ಮಾಡಿ ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ಮಾದರಿಯಲ್ಲಿ ಉದ್ಯಾನಗಳ ಅಭಿವೃದ್ಧಿ ಮಾಡಲಾಗುತ್ತದೆ.

ಅಲ್ಲದೆಟ್ರೀ ಪಾರ್ಕ್ಸ್ಥಾಪಿಸುವ ನಿರ್ಧಾರ ಮಾಡಲಾಗಿದೆ. ಇಲ್ಲಿ ಯಾವುದೇ ಮರಗಳನ್ನು ಕಡಿಯುವುದಿಲ್ಲ. ಇದರಿಂದ ಕಾಡಿನ ಸಂರಕ್ಷಣೆಯೂ ಆದಂತೆ ಆಗುತ್ತದೆ. ಲಾಲ್ ಬಾಗ್ ಅಭಿವೃದ್ಧಿಗೆ ಈಗಾಗಲೇ 10 ಕೋಟಿ ಘೋಷಣೆ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

 

 

 

Share This Article
error: Content is protected !!
";