ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ “ಜಾಗೃತಿ ಅರಿವು ಸಪ್ತಾಹ 2025″ ರ ಅಂಗವಾಗಿ ಸಚಿವಾಲಯದ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರಿಗೆ ಪ್ರತಿಜ್ಞಾ ವಚನವನ್ನು ಬೋಧಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

