ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗ್ತಾರೆ-ಡಿಕೆ ಸುರೇಶ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಸಿಎಂ ಆಗಬೇಕೆಂದು ಬರೆದಿದ್ದರೆ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೇಕೆ ತಲೆಕೆಡಿಸಿಕೊಳ್ಳಬೇಕು? ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ.ಸುರೇಶ್ ಅಚ್ಚರಿಯ  ಹೇಳಿಕೆ ನೀಡಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಸಹೋದರ ಡಿ.ಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಬದಲಾಗಲಿದೆ ಹಾಗೂ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡುವ ಆಸೆ ಇದೆ ಎನ್ನುವ ಹಿಂದಿನ ಹೇಳಿಕೆ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ
, ಆಸೆ ಇದೆ ಎಂದು ಹೇಳಿದ್ದೆ. ಅವರ ಹಣೆಯಲ್ಲಿ ‌ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ.

- Advertisement - 

ಪಕ್ಷದ ಅಧ್ಯಕ್ಷರಾಗಿ, ಡಿಸಿಎಂ ಆಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಸುರೇಶ್ ತಿಳಿಸಿದರು. ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಬಗ್ಗೆ ಕೇಳಿದಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ರಾಜಕೀಯದಲ್ಲಿ 95-98 ವರ್ಷ ಆದವರೂ ಇದ್ದಾರೆ.

ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವ ತಪ್ಪೂ ಇಲ್ಲ.‌ಅವರು ನಮ್ಮ ನಾಯಕರು. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಹೇಳಿದರು.

- Advertisement - 

ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನವರು ಅನಿವಾರ್ಯವೇ ಎಂಬ ಪ್ರಶ್ನೆಗೆ, ಒಬ್ಬ ನಾಯಕನಿಗೆ ಇರಬೇಕಾದ ಎಲ್ಲ ಅವಕಾಶಗಳು ಅವರಿಗಿದೆ. ಎಲ್ಲರಿಗಿಂತ ಗಟ್ಟಿಯಾಗಿ, ಚೆನ್ನಾಗಿ ಓಡಾಡುತ್ತಿದ್ದಾರೆ. ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ ಎಂದು ಡಿ.ಕೆ ಸುರೇಶ್ ಸಮರ್ಥಿಸಿಕೊಂಡರು.

ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರದ ವಿಚಾರ ಕುರಿತು ನನಗೆ ಹೆಚ್ಚು ಮಾಹಿತಿಯಿಲ್ಲ. ಇದು ಎರಡೂವರೆ ವರ್ಷದ ವಿಚಾರವಲ್ಲ. ಐದು ವರ್ಷಗಳ ಕಾಲ ಕೆಲಸ ಮಾಡಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. 140 ಸ್ಥಾನಗಳನ್ನು ಕೊಟ್ಟಿದ್ದಾರೆ. ನಾವು ಜನರ ಹಿತ ಕಾಯಬೇಕು. ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ‌ಮಾಡುತ್ತಿವೆ ಎಂದು ಅವರು ತಿಳಿಸಿದರು.

ಸರ್ಕಾರ ಎಲ್ಲರನ್ನೂ ತೃಪ್ತಿಪಡಿಸಲು ಆಗುವುದಿಲ್ಲ. ಯಾವುದೇ ಸರ್ಕಾರ ಇದ್ದರೂ ನಾಯಕರು ಕಾರ್ಯಕರ್ತರ ಅಭಿಪ್ರಾಯ ಬೇರೆ, ಬೇರೆ ಇದ್ದೇ ಇರುತ್ತದೆ. ಇದನ್ನು ಸರಿದೂಗಿಸುವ ಕೆಲಸವನ್ನು ಪಕ್ಷ ಹಾಗೂ ನಾಯಕತ್ವ ಮಾಡುತ್ತದೆ ಎಂದರು.

 

Share This Article
error: Content is protected !!
";