ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
RSS ಪಥಸಂಚನಲಕ್ಕೆ ಅವಕಾಶ ನೀಡದಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗು ಸಚಿವ ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ?
ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ. ಈ ರೀತಿ ಹಿಂಬಾಗಿಲಿನಿಂದ ಆರ್ ಎಸ್ಎಸ್ ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ RSS ನಿಷೇಧ ಮಾಡಿ ನೋಡೋಣ ಎಂದು ಅಶೋಕ್ ಸವಾಲ್ ಹಾಕಿದ್ದಾರೆ.

