ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ರಸ್ತೆಗಳಲ್ಲಿ ಗುಂಡಿಮುಚ್ಚದಿರುವುದನ್ನು ಖಂಡಿಸಿ ಜೆಡಿಎಸ್‌ಕಾರ್ಯಕರ್ತರು ಕಾಂಕ್ರೀಟ್‌ಹಾಕಿ ಗುಂಡಿಗಳನ್ನು ಮುಚ್ಚುವ ಮೂಲಕ ಕಾಂಗ್ರೆಸ್‌ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ, ಹಿರಿಯ ಮುಖಂಡರಾದ ಹೆಚ್.ಜಿ. ವೆಂಕಟೇಶ್‌ಗೌಡ್ರು, ಕ್ಷೇತ್ರ ಘಟಕದ ಅಧ್ಯಕ್ಷ ದಿವಾಕರ್ ಭಟ್, ತಾಲ್ಲೂಕು ಘಟಕದ ಅಧ್ಯಕ್ಷ ಕಗ್ಗಾ ರಾಮಸ್ವಾಮಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

