ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ತಾಲ್ಲೂಕಿನ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರತ್ಯುಷ ಅವರು ಬಾಲಕಿಯರ ವಿಭಾಗದ 100 ಮೀ ಹರ್ಡ್‍ಲ್ಸ್‍ನಲ್ಲಿ ಪ್ರಥಮ ಹಾಗೂ 400 ಮೀ ಹರ್ಡ್‍ಲ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಉಪವಿಭಾಗಾಧಿಕಾರಿ ಮಹಿಬೂಬ್ ಜೀಲಾನಿ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಸತಿ ಶಾಲೆಯ ಪ್ರಾಂಶುಪಾಲ ಎನ್.ಮಂಜುನಾಥ ರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

