ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ ಕಾಲೇಜುಗಳ ೧೪ ನೇ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ
ಪ್ರಥಮ ಬಿ.ಎ. ವಿದ್ಯಾರ್ಥಿನಿ ಮಮತಾ ಎಸ್. ಮಹಿಳೆಯರ ತ್ರಿಪಲ್ ಜಂಪ್‌ನಲ್ಲಿ ಪ್ರಥಮ ಸ್ಥಾನ ಗಳಿಸಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯದ ಅಥ್ಲೆಟಿಕ್ಸ್ ಚಾಂಪಿಯನ್ಸ್‌ಗೆ ಆಯ್ಕೆ ಆಗಿದ್ದಾರೆ.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ದೈಹಿಕ ಶಿಕ್ಷಣ ನಿರ್ದೇಶಕರು ಮಮತಾ ಎಸ್.ಗೆ ಶುಭ ಹಾರೈಸಿದ್ದಾರೆ.

