ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಅ. 31 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ 01 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ಬಳಿಕ ನಗರದಲ್ಲಿನ ಮದಕರಿ ನಾಯಕ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡುವರು. ನಂತರ ಚಿತ್ರದುರ್ಗ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ, ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಮಧ್ಯಾಹ್ನ 1.30 ಗಂಟೆಗೆ ನಗರದ ಜಾಮಿಯಾ ಮಸೀದಿಗೆ ಭೇಟಿ ನೀಡುವರು. ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಅನ್ವರ್ ಬಾಷಾ ಅವರ ನಿವಾಸಕ್ಕೆ ಭೇಟಿ ನೀಡಿ, ಸಂಜೆ 5.30 ಗಂಟೆಗೆ ವಿಜಯನಗರ ಜಿಲ್ಲೆ ಕೂಡ್ಲಿಗಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

