ಗೋಣಿ ಚೀಲದಲ್ಲಿ ತುಂಬಿ ಉಪಹಾರ ವಿತರಣೆ ಆರೋಪ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಪೌರಕಾರ್ಮಿಕರಿಗೆ ಬೆಳಗಿನ ಉಪಹಾರವನ್ನು ಸ್ವಚ್ಛವಿರದ ಗೋಣಿ ಚೀಲದಲ್ಲಿ ತುಂಬಿ ತಂದು ನೀಡುತ್ತಾರೆ. ಈ ಕುರಿತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ
, ಆದರೂ ಸಂಬಂಧಪಟ್ಟ ಅಧಿಕಾರಿಯ ಮೇಲೆ ಕ್ರಮ ಕೈಗೊಂಡಿಲ್ಲ.

ಚಿತ್ರದುರ್ಗ ನಗರದಲ್ಲಿ ಮುಂಜಾನೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಪೌರಕಾರ್ಮಿಕ ಮಹಿಳೆಯ ಮೇಲೆ ಆಟೋಚಾಲಕ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾನೆ. ಇಂತಹ ಘಟನೆಗಳು ಮರುಕಳಿಸದಂತೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪುರ್ನವಸತಿ ಸಮಿತಿ ಸದಸ್ಯ ಮಂಜಣ್ಣ ಆಗ್ರಹಿಸಿದರು.

- Advertisement - 

 ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಮಿಕರು ಇಲ್ಲಾ ಎಂದು ವರದಿ ನೀಡಲಾಗಿದೆ. ಆದರೆ ನಗರಸಭೆ ಹೊರತು ಪಡಿಸಿ, ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಸಕ್ಕಿಂಗ್ ಮಿಷನ್‌ಗಳು ಇಲ್ಲ.

ಜಿಲ್ಲೆಯಲ್ಲಿ ಕೈಯಿಂದ ಮಲಗುಂಡಿಗಳನ್ನು ಸ್ವಚ್ಛಗೊಳಿಸುವವರು ಇದ್ದಾರೆ. ಈ ಬಗ್ಗೆ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಪೌರ ಕಾರ್ಮಿಕರಿಗೆ ಯೋಜನೆ ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅಧ್ಯಕ್ಷರಲ್ಲಿ ಮಂಜಣ್ಣ ಕೋರಿದರು.

- Advertisement - 

 

Share This Article
error: Content is protected !!
";