ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಎಲ್ಲಾ ಪೌರಕಾರ್ಮಿಕರಿಗೆ ನಿವೇಶನ ಮಂಜೂರಾತಿ ಮಾಡುವುದು ನನ್ನ ಪ್ರಥಮ ಆಧ್ಯತೆಯಾಗಿದೆ. ಈಗಾಗಲೇ ಖಾಯಂಗೊಂಡ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಪೌರ ಕಾರ್ಮಿಕರು ಸಂವಾದಲ್ಲಿ ಹೇಳಿಕೊಂಡ ಎಲ್ಲಾ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಳ್ಳಲಾಗಿದೆ.
ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಮುಕ್ತಿ ಹಾಡುವುದಾಗಿ ರಾಜ್ಯ ಸಫಾಯಿ ಕರ್ಮಚಾರಿ ಆಯೊಗದ ಅಧ್ಯಕ್ಷ ರಘು.ಪಿ ಭರವಸೆ ನೀಡಿದರು.
ಈ ವೇಳೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಮಹಾದೇವ ಸ್ವಾಮಿ, ಸಿಇಓ ಡಾ. ಆಕಾಶ್.ಸಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ಮತ್ತಿತರರು ಇದ್ದರು.

