ಸಪ್ನಾ ಪ್ರಕಾಶನ ಸಂಸ್ಥೆಯ ರಾಜ್ಯೋತ್ಸವದಲ್ಲಿ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಿನ ಹೆಮ್ಮೆಯ ಪ್ರಕಾಶನ ಸಂಸ್ಥೆ ಸಪ್ನ ಪುಸ್ತಕ ಮಳಿಗೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪುಸ್ತಕ ಜಾತ್ರೆ ಕಾರ್ಯಕ್ರಮದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು.

ಈ ಅಪರೂಪದ ಸಮಾರಂಭದಲ್ಲಿ ರಾಜ್ಯಸಭೆ ಸದಸ್ಯರು, ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರಾದ ಸುಧಾಮೂರ್ತಿ, ಹಿರಿಯ ಸಾಹಿತಿ ಜಾಣಗೆರೆ ವೆಂಕಟರಾಮಯ್ಯ, ಲೇಖಕ ಮತ್ತು ನಟ ಅನಿರುದ್ಧ ಜತಕರ,

- Advertisement - 

ನಟಿ ಕುಮಾರಿ ಅಂಕಿತ ಅಮರ್, ಸಪ್ನ ಪುಸ್ತಕ ಮಳಿಗೆಯ ನಿತಿನ್ ಶಾ, ದೊಡ್ಡೇಗೌಡ, ಸಾಹಿತಿಗಳಾದ ಡುಂಡಿರಾಜ್, ಎಂ.ಎಸ್. ನರಸಿಂಹಮೂರ್ತಿ, ವೈ.ವಿ. ಗುಂಡೂರಾವ್ ಅವರು ಸೇರಿ ಅನೇಕ ಸಾಹಿತಿಗಳು, ಸಾಹಿತ್ಯಾಸಕ್ತರು ಭಾಗಿಯಾಗಿದ್ದರು.

 

- Advertisement - 

 

 

Share This Article
error: Content is protected !!
";