ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಿದ ಸುಧಾಕರ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 26 ಮಂದಿ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಏರ್ಪಡಿಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಿದ ಗಣತಿದಾರರನ್ನೂ ಸನ್ಮಾನಿಸಲಾಯಿತು.

- Advertisement - 


ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ:
ಚಿತ್ರದುರ್ಗ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ವೆಸ್ಟರ್ನ್ ಹಿಲ್ಸ್ ಹಾಗೂ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕನ್ನಡ ನಾಡು-ನುಡಿ ಸಂಸ್ಕøತಿ ಹಾಗೂ ಮಹತ್ವ ಸಾರುವಂತಹ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

- Advertisement - 

ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಕಂಠೀರವ ಸ್ಟುಡಿಯೋಸ್ ನಿಯಮಿತ ಅಧ್ಯಕ್ಷ ಮಹಬೂಬ್ ಪಾಷ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್,

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು,

ಅಪರ  ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

 

 

 

 

 

 

Share This Article
error: Content is protected !!
";