ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ಸರ್ಕಾರ ಎಚ್ಚರವಹಿಸಲಿದೆ-ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಈ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಆರ್ಟಿಫಿಷಿಯಲ್ ತಂತ್ರಜ್ಞಾನದಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕ ಎದುರಾಗಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ತಂತ್ರಜ್ಞಾನ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಕರೆ ನೀಡಿದರು.

1956 ರಂದು ಏಕೀಕರಣಗೊಂಡ ನಮ್ಮ ಕರ್ನಾಟಕ ರಾಜ್ಯ ಉದಯವಾಗಿ ನವೆಂಬರ್ 1, 2025 ಕ್ಕೆ 69 ವರ್ಷ ಪೂರೈಸಿ 70 ನೇ ವರ್ಷಕ್ಕೆ ಮುನ್ನಡೆಯುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ನಡೆಸಿದ ಎಲ್ಲ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ.

- Advertisement - 

ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ಮೈಸೂರಿನ ವಿದ್ಯಾರ್ಥಿ ರಾಮಸ್ವಾಮಿ, ಬಳ್ಳಾರಿಯ ರಂಜಾನ್ ಸಾಬ್ ಮುಂತಾದವರಿಗೆ ತಲೆಬಾಗಿ ನಮಿಸುತ್ತೇನೆ. ಏಕೀಕರಣ ಚಳುವಳಿಯ ಬೀಜಗಳನ್ನು ಬಿತ್ತಿ, ಅದನ್ನು ಮುನ್ನಡೆಸಿದ ಆಲೂರು ವೆಂಕಟರಾಯರು, ಅಂದಾನಪ್ಪ ದೊಡ್ಡಮೇಟಿ, ಗುದ್ಲೆಪ್ಪ ಹಳ್ಳಿಕೇರಿ, ಸಿದ್ದಪ್ಪ ಕಂಬಳಿ, ಆರ್.ಎಚ್. ದೇಶಪಾಂಡೆ, ಕೌಜಲಗಿ ಶ್ರೀನಿವಾಸ ರಾವ್, ಕೆಂಗಲ್ ಹನುಮಂತಯ್ಯ ಮುಂತಾದ ಮಹನೀಯರನ್ನು ಹೃದಯ ತುಂಬಿ ಸ್ಮರಿಸಿ, ಇವರೆಲ್ಲರ ಹೋರಾಟದ ಫಲವೆ ಇಂದಿನ ಕರ್ನಾಟಕ.

ಮನುಷ್ಯ ಜಾತಿ ತಾನೊಂದೇ ವಲಂಎಂದ ಆದಿಕವಿ ಪಂಪನಿಂದ ಹಿಡಿದು ಇಲ್ಲಿಯವರೆಗೂ ಕನ್ನಡದ ಸಾಹಿತ್ಯ ಸಂಪತ್ತು ಸಾಕಷ್ಟು ಸಮೃದ್ಧಗೊಂಡಿದೆ. ನಮ್ಮ ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರಕಿದೆ ಎಂದರು.

- Advertisement - 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸ್ವಾಗತಿಸಿದರು ಹಾಗೂ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ವಂದಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಶಾಸಕರಾದ ರಿಜ್ವಾನ್ ಅರ್ಷದ್, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಬಿ.ಆರ್.ಪಾಟೀಲ್, ಗೋವಿಂದರಾಜು ಹಾಗೂ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷ ಡಾ.ಎಂ.ಎ. ಸಲೀಂ ಮತ್ತಿತರರು ಉಪಸ್ಥಿತರಿದ್ದರು.

 

Share This Article
error: Content is protected !!
";