ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕನ್ನಡ ರಾಜ್ಯೋತ್ಸವ ಹಿನ್ನೆಲೆ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರಕ್ಕೆ ಬಣ್ಣ ಬಣ್ಣದ ವಿದ್ಯುತ್ ಲೈಟ್ಸ್ ಗಳಿಂದ ಅಲಂಕರಿಸಲಾಗಿದೆ.
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರ ಕನ್ನಡ ಭಾವುಟ ಬಣ್ಣದ ಬೆಳಕಿನಿಂದ ಕಂಗೊಳಿಸುತ್ತಿದೆ. ದೇವಾಲಯವನ್ನು ನಾಡ ಧ್ವಜದ ಬಣ್ಣಗಳ ಮೂಲಕ ಬೆಳಕಿನ ಅಲಂಕಾರ ಮಾಡಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.
ದೇವಾಲಯದ ದೀಪಾಲಂಕಾರ ವಿಶೇಷವಾಗಿದ್ದು , ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

