ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಬಸವ ಭವನದ ಬಳಿ ಇರುವ ಲಾವಣ್ಯ ಸಂಯುಕ್ತ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ 70 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶತಮಾನ ತುಂಬಿದ ನಾಡಗೀತೆಯನ್ನು ನೂರು ಜನ ವಿದ್ಯಾರ್ಥಿಗಳಿಂದ ನಾಡಗೀತೆ ಹಾಡುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿಎಡ್ ಕಾಲೇಜು ಪ್ರಾಂಶುಪಾಲ ಪ್ರೊ ಜಿ ಕೃಷ್ಣಮೂರ್ತಿ ಕನ್ನಡ ಭಾಷೆಯನ್ನು ಉಳಿಸುವ ಬೆಳೆಸುವ ಜವಾಬ್ದಾರಿ ನಮ್ಮ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಹೇಳಿದರು.
ಪದವಿ ಪೂರ್ವ ಮತ್ತು ಪದವಿ ಕಾಲೇಜು ಪ್ರಾಂಶುಪಾಲ ಎಂ ಸಿ ಮಂಜುನಾಥ್ ಮಾತನಾಡಿ ನಮ್ಮ ನಾಡಗೀತೆಗೆ ಶತಮಾನ ತುಂಬಿರುವುದು ಸಂತಸ ವಿಷಯ ಕುವೆಂಪು ಹೇಳಿದಂತೆ ನಮ್ಮ ನಾಡಗೀತೆ “ಕರ್ನಾಟಕ ರಾಷ್ಟ್ರಗೀತೆ”ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕಾರ್ತಿಕ್ ಮಹಾದೇವ್ ಎನ್ ರಶ್ಮಿ ಹರ್ಷಿತಾ ಜಿ ಅನು ಗಂಗಮೂರ್ತಿ ರಾಕೇಶ್ ಆಶಾ ಎಸ್ ಗುರುಪ್ರಸಾದ್ ಮೀನಾ ದೈಹಿಕ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

