ಸ್ಕೂಟರ್ ಗೆ ಆಂಬ್ಯುಲೆನ್ಸ್ ಡಿಕ್ಕಿ ದಂಪತಿ ಸಾವು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಂಬ್ಯುಲೆನ್ಸ್ ಮತ್ತು ಸ್ಕೂಟರ್ ಮಧ್ಯ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಾಂತಿನಗರದ ಕೆ. ಹೆಚ್. ರಸ್ತೆಯ ಸಂಗೀತಾ ಸಿಗ್ನಲ್ ಬಳಿ ಆಂಬ್ಯುಲೆನ್ಸ್ ಮತ್ತು ಸ್ಕೂಟರ್ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.

ಖಾಸಗಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ‌ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಸ್ಮಾಯಿಲ್ (40) ಹಾಗೂ ಸಮೀನ್ ಬಾನು (33) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳು. ಮೃತರು ಸೋಮೇಶ್ವರ ನಗರದ ನಿವಾಸಿಗಳಾಗಿದ್ದಾರೆ.

- Advertisement - 

ರಿಚ್ಮಂಡ್ ರಸ್ತೆಯ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್ ಚಾಲಕ, ಊರ್ವಶಿ ಚಿತ್ರಮಂದಿರ ಕಡೆಯಿಂದ ವಿಲ್ಸನ್ ಗಾರ್ಡನ್ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ ಅಪಘಾತವೆಸಗಿದ್ದಾನೆ.

ಆಂಬ್ಯುಲೆನ್ಸ್ ಕೆಳಗೆ ಸಿಲುಕಿದ್ದ ದ್ವಿಚಕ್ರ ವಾಹನ 20- 30 ಮೀಟರ್ ನಷ್ಟು ದೂರು ಎಳೆದುಕೊಂಡು ಚಲಾಯಿಸಿದ್ದಾನೆ. ಬಳಿಕ ಟ್ರಾಫಿಕ್ ಪೊಲೀಸ್ ಚೌಕಿಗೆ ಗುದ್ದಿ ಆಂಬ್ಯುಲೆನ್ಸ್ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.

- Advertisement - 

ಸ್ಥಳೀಯರು ಬಂದು ಆಂಬ್ಯುಲೆನ್ಸ್ ಪಲ್ಟಿ ಮಾಡಿ ಪರಿಶೀಲಿಸಿದಾಗ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಆಂಬ್ಯುಲೆನ್ಸ್​ ಅಡಿ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಟ್ರಾಫಿಕ್ ಪೊಲೀಸ್​ ಚೌಕಿಗೆ ಗುದ್ದುವ ಮುನ್ನ ಆಂಬ್ಯುಲೆನ್ಸ್​ ಇನ್ನೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಅದರಲ್ಲಿದ್ದ ಸವಾರರಾದ ರಿಯಾನ್​ ಹಾಗೂ ಸಿದ್ದಿಕ್​ ಗಾಯಗೊಂಡಿದ್ದಾರೆ.

ಚಾಲಕ ಬಂಧನ:
ಆಂಬ್ಯುಲೆನ್ಸ್​ ಚಾಲಕ ಅಶೋಕ್​ ಎಂಬುವರನ್ನು ವಿಲ್ಸನ್​ ಗಾರ್ಡನ್​ ಸಂಚಾರ​ ಪೊಲೀಸ್​ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share This Article
error: Content is protected !!
";