ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಾನೂನು ಕ್ರಮ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ
, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ, ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಈಗಾಗಲೇ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. 

- Advertisement - 

ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

- Advertisement - 

Share This Article
error: Content is protected !!
";