ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಬುಡಕಟ್ಟು ಸಮುದಾಯಗಳ ಪರವಾಗಿ ಬ್ರಿಟೀಷರ ವಿರುದ್ಧ ಹೋರಾಡಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ಜಯಂತಿ ಅಂಗವಾಗಿ ಹಮ್ಮಿಕೊಳ್ಳಬೇಕಾದ ಕಾರ್ಯಾಚಟುವಟಿಕೆಗಳ ಕುರಿತು ಪೂರ್ವ ಭಾವಿ ಸಭೆ ನಡೆಸಲಾಯಿತು.
ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ಗೌರವಾರ್ಥ ನವೆಂಬರ್15 ನ್ನು ಜನಜಾತೀಯ ಗೌರವ ದಿವಸವಾಗಿ ಆಚರಿಸಲಾಗುತ್ತಿದ್ದು, ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂಬ ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಬಸವರಾಜ್ ಮುತ್ತಿಮಡು, ST ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

