ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್‌ನಲ್ಲಿ ‘ಕರ್ನಾಟಕ ಬಿಹಾರ್ ಸಮಾಜ‘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗವಹಿಸಿ, ಬಿಹಾರ ಮೂಲದ ಬೆಂಗಳೂರು ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ ಎರಡು ದಶಕಗಳಿಂದ ಆಡಳಿತದಲ್ಲಿದ್ದರೂ ಬಿಹಾರ್ ರಾಜ್ಯವನ್ನು ಅಭಿವೃದ್ಧಿಪಡಿಸುವುದರಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಮೈತ್ರಿಕೂಟ ವಿಫಲವಾಗಿದೆ ಎಂದು ಶಿವಕುಮಾರ್ ಆರೋಪಿಸಿದರು.
ಈ ಬಾರಿಯ ಬಿಹಾರ್ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟವು ಒಗ್ಗಟ್ಟಾಗಿ ಚುನಾವಣಾ ಕಣಕ್ಕಿಳಿದಿದೆ. ಈ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಲು ಎಲ್ಲರೂ ಬೆಂಬಲಿಸಿ, ಸಹಕರಿಸಬೇಕು.

ಅಲ್ಲದೆ, ನವೆಂಬರ್-6 ಮತ್ತು 11 ರಂದು ನಡೆಯಲಿರುವ ಬಿಹಾರ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ನೆಲೆಸಿರುವ ಬಿಹಾರ್ ನಿವಾಸಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಕಂಪನಿಗಳು ಮೂರು ದಿನಗಳ ರಜೆ ನೀಡಬೇಕೆಂದು ಡಿಸಿಎಂ ಶಿವಕುಮಾರ್ ಮನವಿ ಮಾಡಿದರು.

