ಜಿಟಿಟಿಸಿ 37ಹುದ್ದೆಗಳಿಗೆ ಸಂದರ್ಶನ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಗ್ರೂಪ್ – ಸಿ ವಿವಿಧ ವೃಂದದ 37 ಹುದ್ದೆಗಳ ಅರ್ಹ ಅಭ್ಯರ್ಥಿಗಳಿಗೆ ನವೆಂಬರ್ 10 ರಿಂದ 14 ರವರೆಗೆ ಮೊದಲ ಹಂತದ ಸಂದರ್ಶನವನ್ನು ನಡೆಸಲಾಗುತ್ತಿದೆ.
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಉಳಿಕೆ ಮೂಲವೃಂದದ 98 ಹುದ್ದೆಗಳಿಗೆ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು. ಇದರನ್ವಯ ಮೊದಲ ಹಂತದ ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್ 3 ರಂದು ಜಿಟಿಟಿಸಿ ಜಾಲತಾಣ https://gttc.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಅಕ್ಟೋಬರ್ 29 ರಂದು ಸೂಚನಾ ಪತ್ರವನ್ನು ಇ-ಮೇಲ್ ಮೂಲಕ ಮತ್ತು ಸ್ಪೀಡ್ ಪೋಸ್ಟ್ ಮುಖಾಂತರ ಕಳುಹಿಸಲಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಜಾಲತಾಣ https://gttc.karnataka.gov.in ನಿಂದ ಪಡೆದುಕೊಳ್ಳಬಹುದಾಗಿದೆ ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

